HomeLive NewsBIG NEWS : ಸಿಎಂ ಸಿದ್ದರಾಮಯ್ಯ ಆಪ್ತ ಸ್ನೇಹಿತ ಡಿ.ವೈ.ಉಪ್ಪಾರ್ ನಿಧನ.!

BIG NEWS : ಸಿಎಂ ಸಿದ್ದರಾಮಯ್ಯ ಆಪ್ತ ಸ್ನೇಹಿತ ಡಿ.ವೈ.ಉಪ್ಪಾರ್ ನಿಧನ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಆಪ್ತ ಸ್ನೇಹಿತ ಡಿ.ವೈ.ಉಪ್ಪಾರ್ ನಿಧನರಾಗಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಉಪ್ಪಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಹಿರಿಯ ಗುತ್ತಿಗೆದಾರ ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಸ್ನೇಹಿತ ಡಿ.ವೈ.ಉಪ್ಪಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ಜೊತೆಗಿದ್ದರು.

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ : ಸಿಎಂ ಸಿದ್ದರಾಮಯ್ಯ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಮನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮತ್ತು ಮನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು. ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಇಲಾಖೆ ಈಗಾಗಲೇ ಶಿಸ್ತು ಕ್ರಮ ಜರುಗಿಸಿ ಅಮಾನತ್ತುಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular