HomeLatest Newsನ.9 ರಂದು ವಿಜಯನಗರದಲ್ಲಿ 'CM ಸಿದ್ದರಾಮಯ್ಯ' ಕಾರ್ಯಕ್ರಮ ; KSRTC ಬಸ್ ಸಂಚಾರದಲ್ಲಿ ವ್ಯತ್ಯಯ

ನ.9 ರಂದು ವಿಜಯನಗರದಲ್ಲಿ ‘CM ಸಿದ್ದರಾಮಯ್ಯ’ ಕಾರ್ಯಕ್ರಮ ; KSRTC ಬಸ್ ಸಂಚಾರದಲ್ಲಿ ವ್ಯತ್ಯಯ

ಇದೇ ನ.09 ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಬಳ್ಳಾರಿ ವಿಭಾಗದಿಂದ ಒಟ್ಟು 165 ಬಸ್ಸುಗಳನ್ನು ವಿಜಯನಗರ ಜಿಲ್ಲೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದ್ದು, ನ.08 ರಂದು ಸಂಜೆ ಮತ್ತು ನ.09 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ, ಕಂಪ್ಲಿ, ಸಂಡೂರು ಭಾಗದಿಂದ ವಿವಿಧ ಸ್ಥಳಗಳಿಗೆ ತೆರಳುವ ದೈನಂದಿನ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.

ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular