HomeLatest Newsವಿಧಾನಪರಿಷತ್ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್: ಶಾಸಕರ ರೀತಿ ಕ್ಷೇತ್ರ ಅಭಿವೃದ್ಧಿ ಅನುದಾನ ಭರವಸೆ

ವಿಧಾನಪರಿಷತ್ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್: ಶಾಸಕರ ರೀತಿ ಕ್ಷೇತ್ರ ಅಭಿವೃದ್ಧಿ ಅನುದಾನ ಭರವಸೆ

ಬೆಂಗಳೂರು: ವಿಧಾನಪರಿಷತ್ ಸದಸ್ಯರಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಆಡಳಿತ ಪಕ್ಷದ ವಿಧಾನ ಪರಿಷತ್ ಸದಸ್ಯರೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಬಜೆಟ್ ನಲ್ಲಿ ಮೀಸಲಿರಿಸಿರುವ 8000 ಕೋಟಿ ರೂ.ನಲ್ಲಿ ವಿಧಾನ ಪರಿಷತ್ ಸದಸ್ಯರಿಗೂ ಅನುದಾನ ಹಂಚಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

ಶಾಸಕರಿಗೆ ನೀಡಿದಂತೆ ತಮಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯರು ಮನವಿ ಮಾಡಿದ್ದು, ವಿಶೇಷ ಅನುದಾನ ನೀಡಬೇಕೆಂಬ ವಿಧಾನ ಪರಿಷತ್ ಸದಸ್ಯರ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular