ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯವಾಗಿದ್ದು, ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗದೇ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಇಂದಿನಿಂದ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ತೆನೋವು ಹಿನ್ನೆಲೆಯಲ್ಲಿ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.. ನಿನ್ನೆ ಮಧ್ಯಾಹ್ನದಿಂದ ಸದನಕ್ಕೂ ಗೈರಾಗಿದ್ದು, ಸಂಜೆಯವರೆಗೂ ಯಾವುದೇ ಕಾರ್ಯಕ್ರಮಗಳಿಗೆ ಭಾಗಿಯಾಗದೇ ವಿಶ್ರಾಂತಿ ಪಡೆಯುತ್ತಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಇಂದಿನಿಂದ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.
ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು

