ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮ ಭರ್ಜರಿ ಯಶಸ್ವಿಯಾಗಿದ್ದು, ಒಂದೇ ದಿನ 12,372 ಅರ್ಜಿಗಳು ಸ್ವೀಕೃತಗೊಂಡಿದ್ದು, 20 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಂದಾಯ, ಪೊಲೀಸ್ ಹಾಗೂ ಇತರೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೆಳ ಹಂತದಲ್ಲಿಯೇ ಬಗೆಹರಿಸಿದರೆ, ಜನರು ಬೆಂಗಳೂರಿಗೆ ಬಂದು ಇಷ್ಟೊಂದು ಅರ್ಜಿಗಳನ್ನು ನೀಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಅಂದಾಗ ಮಾತ್ರ ಅರ್ಜಿಗಳ ಸಂಖ್ಯೆ ಕಡಿಮೆ ಆಗಲು ಸಾಧ್ಯವಾಗುತ್ತದೆ ಎಂದರು.
ಆಡಳಿತ ಎಂದು ಕೂಡ ಜಡತ್ವದಿಂದ ಕೂಡಿರಬಾರದು. ಇದರಿಂದ ಸಮಸ್ಯೆಗಳು ಹೆಚ್ಚು ಉದ್ಬವವಾಗುತ್ತವೆ. ಜನರು ಸಮಸ್ಯೆಗಳನ್ನು ಹೊತ್ತು ಬಂದಾಗ ಅಧಿಕಾರಿಗಳು ಸಾವಧಾನದಿಂದ ಆಲಿಸಬೇಕು.
ತಮ್ಮ ತಮ್ಮ ಹಂತದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ, ಜನರಿಗೆ ಅಗೌರ ತೋರಿಸಿದರೆ ಅಂತಹ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ಒಂದು ತಿಂಗಳೊಳಗಾಗಿ ಅರ್ಜಿಗಳ ವಿಲೇವಾರಿ ಮಾಡುವಂತಹ ಕೆಲಸ ಆಗಬೇಕು. ಈ ಹಿನ್ನೆಲೆಯಲ್ಲಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅರ್ಜಿದಾರರು ಯಾವುದೇ ಚಿಂತೆ, ಸಂಶಯ ಪಡೆಯುವ ಅಗತ್ಯವಿಲ್ಲ. ಎಲ್ಲಾ ಅರ್ಜಿಗಳಿಗೂ ಸರ್ಕಾರದಿಂದ ಪರಿಹಾರ ಸಿಗಲಿದೆ ಎಂದು ಅವರು ಹೇಳಿದರು.