HomeLatest Newsಸೆ. 6 ಆಲಮಟ್ಟಿ ಡ್ಯಾಂಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಸೆ. 6 ಆಲಮಟ್ಟಿ ಡ್ಯಾಂಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಆಲಮಟ್ಟಿ: ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಉತ್ತರ ಕರ್ನಾಟಕ ಜೀವನದಿ ಕೃಷ್ಣಾಗೆ ಸೆ. 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.

ಆಗಸ್ಟ್ ಎರಡನೆಯ ವಾರದವರೆಗೆ ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ವ್ಯಾಪಕ ಮಳೆಯಾಗಿ ಕೃಷ್ಣಾ ನದಿಯ ಮುಖ್ಯ ಹರಿವು ಹಾಗೂ ಅದರ ಉಪನದಿಗಳಲ್ಲಿ ಅಪಾರ ಪ್ರಮಾಣದ ನೀರು ಬಂದಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಜಾನುವಾರುಗಳಿಗೆ ಜೀವ ಹಾನಿಯಾಗದಿರಲಿ ಎನ್ನುವ ಉದ್ದೇಶದಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಮಾತನಾಡಿ ಪ್ರವಾಹ ಸಮಯದಲ್ಲಿ ಆಲಮಟ್ಟಿ ಜಲಾಶಯದಲ್ಲಿ 519.60 ಮೀಟರ್ ಗೆ ಬದಲಾಗಿ 517 ಮೀಟರ್ ವರೆಗೆ ಮಾತ್ರ ನೀರು ಸಂಗ್ರಹಿಸಲು ಪರಸ್ಪರ ಸಹಮತಿ ಸೂಚಿಸಿವೆ.

ಕೃಷ್ಣಾ ನದಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಸಾಮಾನ್ಯವಾಗಿ ಆಗಸ್ಟ್ ಕೊನೆ ಇಲ್ಲವೇ ಸೆಪ್ಟೆಂಬರ್ ಮೊದಲ ವಾರದಲ್ಲಿ ನೆರವೇರಿಸಲಾಗುತ್ತದೆ. ಸೆಪ್ಟೆಂಬರ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಕೆಬಿಜೆಎನ್ಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular