BREAKING : ಶಿವಮೊಗ್ಗ ಗಲಾಟೆ ಪ್ರಕರಣದ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಹೇಳಿದ್ದೇನು.?

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ದುಷ್ಕರ್ಮಿಗಳು ಪೊಲೀಸರ ಮೇಲೂ ಕಲ್ಲು ತೂರಿದ್ದಾರೆ. ಒಂದು ಧರ್ಮದ ಕಾರ್ಯಕ್ರಮ ನಡೆಯುವಾಗ ಈ ರೀತಿ ಗಲಾಟೆ ಮಾಡೋದು ತಪ್ಪು, ನಮ್ಮ ಸರ್ಕಾರ ಇದನ್ನು ಖಂಡಿಸುತ್ತದೆ. ಸದ್ಯ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 60ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ, ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read