ಮೈಸೂರಲ್ಲಿ ಇಂದು ಸರ್ಕಾರದ ಸಾಧನಾ ಸಮಾವೇಶದ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಒಂದು ಲಕ್ಷಕ್ಕೂ ಅಧಿಕ ಜನ ಭಾಗಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸಿಎಂ ತವರು ಮೈಸೂರಿನಲ್ಲಿ ಇಂದು ಸರ್ಕಾರದ ಸಾಧನೆಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಸಾಧನಾ ಸಮಾವೇಶದ ಹೆಸರಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಸುಮಾರು 2600 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ಸಚಿವರು, ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮದ ವೇದಿಕೆಯ ಮುಂಭಾಗದಿಂದ ಮಧ್ಯದಲ್ಲಿ 200 ಮೀಟರ್ ಗೂ ಅಧಿಕ ಉದ್ದದ ರ್ಯಾಂಪ್ ನಿರ್ಮಾಣ ಮಾಡಲಾಗಿದ್ದು, ಈ ರ್ಯಾಂಪ್ ಮೂಲಕ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರನ್ನು ಕರೆತರಲಾಗುವುದು. ಕಾರ್ಯಕರ್ತರ ಬಳಿಯಿಂದ ಸಿದ್ದರಾಮಯ್ಯ ತೆರಳಲು ವ್ಯವಸ್ಥೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read