BIG NEWS: ಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಇಪಿ ರದ್ದು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ಶಾಲೆಯಿಂದ ಎನ್‌ಇಪಿ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರು ಆರ್.ಎಸ್.ಎಸ್. ಕಾರ್ಯಸೂಚಿ ಭಾಗವಾದ ರಾಷ್ಟ್ರೀಯ ಶಿಕ್ಷಣ ನೀತಿ ಎನ್‌ಇಪಿಯನ್ನು ರಾಜ್ಯದಲ್ಲಿ ಕೈಬಿಡುವಂತೆ ಒತ್ತಾಯಿಸಿದ್ದಾರೆ.

ತಮ್ಮ ಭಾಷಣದ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವರ್ಷ ತಡವಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಎಪಿ ಸಂಪೂರ್ಣವಾಗಿ ರದ್ದು ಮಾಡಿ ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಎನ್ಇಪಿ ಜಾರಿಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಸೇರಿದಂತೆ ಬಹುತೇಕರಿಂದ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿಯೂ ಎನ್ಇಪಿ ಅನುಷ್ಠಾನಗೊಳಿಸಿಲ್ಲ. ಕರ್ನಾಟಕದಲ್ಲಿ ಮಾತ್ರ ತರಾತುರಿಯಲ್ಲಿ ಎನ್ಇಪಿ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read