HomeKarnatakaBIG NEWS: ರಾಜ್ಯ ಆರ್ಥಿಕ ದಿವಾಳಿಯಾಗದಂತೆ ಎಚ್ಚರ ವಹಿಸಿದ್ದೇವೆ : ಇದು ಗ್ಯಾರಂಟಿ ಬಜೆಟ್ ಎಂದ...

BIG NEWS: ರಾಜ್ಯ ಆರ್ಥಿಕ ದಿವಾಳಿಯಾಗದಂತೆ ಎಚ್ಚರ ವಹಿಸಿದ್ದೇವೆ : ಇದು ಗ್ಯಾರಂಟಿ ಬಜೆಟ್ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಅದಕ್ಕಾಗಿ ಹಣ ಒದಗಿಸಿದ್ದೇವೆ. ಇದು ಗ್ಯಾರಂಟಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್ ನಲ್ಲಿ ಅನುದಾನ ಘೋಷಿಸಿದ್ದೇವೆ. ರಾಜ್ಯ ಆರ್ಥಿಕ ದಿವಾಳಿಯಾಗದಂತೆ ನೋಡಿಕೊಂಡಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆ ನೋಂದಣಿ ಜುಲೈ 16ರಿಂದ ಆರಂಭವಾಗಲಿದೆ. ಮನೆ ಯಜಮಾನಿ ಖಾತೆಗೆ ಮಾಸಿಕ 2000 ರೂಪಾಯಿ ಹಣ ಹಾಕುತ್ತೇವೆ. ಆಗಸ್ಟ್ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular