
ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು ಬಸ್ ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
– ಮುಖ್ಯಮಂತ್ರಿ @siddaramaiah#Maharashtra…— CM of Karnataka (@CMofKarnataka) July 1, 2023

