ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು 86 ಶಾಸಕರ ಸಹಿ ಹಾಕಿಸಿಕೊಟ್ಟಿದ್ದೇ ನಾನು: ಹರಿಹಾಯ್ದ ಸೋಮಣ್ಣ

ತುಮಕೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು 86 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹರಿಹಾಯ್ದರು.

ಕೊರಟಗೆರೆಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯರಿಗೆ ಒಂದೇ ಬೂತ್ ನಲ್ಲಿ 2 ಸಾವಿರ ಮತಗಳ ಲೀಡ್ ಕೊಡಿಸಿದ್ದು ಇದೇ ಸೋಮಣ್ಣ. ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಶಾಸಕರ ಸಹಿ ಸಂಗ್ರಹಿಸಿಕೊಟ್ಟಿದ್ದು ಇದೇ ಸೋಮಣ್ಣ ಎಂದು ಹೇಳಿದ್ದಾರೆ.

ನೀವು ಮಾತನಾಡುವಾಗ ಅವರ ಅರ್ಹತೆ ಬಗ್ಗೆ ತಿಳಿಯಬೇಕಿದೆ. ಅವಕಾಶ ದೊರೆತು ನೀವು ಮುಖ್ಯಮಂತ್ರಿಯಾಗಿದ್ದೀರಿ. ಅರ್ಹತೆ ಇದ್ದವರಿಗೆ ಸರಿಯಾದ ಅವಕಾಶ ಸಿಗುವುದಿಲ್ಲ. ನೀವು ಮೇಲೆ ಕುಳಿತಿದ್ದೀರಿ ಎಂದು ಮತ್ತೊಬ್ಬರನ್ನು ಟೀಕೆ ಮಾಡಬೇಡಿ ಎಂದು ಹೇಳಿದ್ದಾರೆ.

ನಾವು ಬಡವರ ಮಕ್ಕಳು. ನಾವು ಇನ್ನೊಬ್ಬರ ಬಗ್ಗೆ ರಾಜಕೀಯ ಪ್ರೇರಿತವಾಗಿ ಮಾತನಾಡುವುದಿಲ್ಲ. ಈ ಸೋಮಣ್ಣನ ಹಿಂದೆ ನರೇಂದ್ರ ಮೋದಿ, ಅಮಿತ್ ಶಾ ಅವರಂತಹ ನಾಯಕರಿದ್ದಾರೆ. ನನಗೆ ಸಂಸ್ಕಾರ ಹೇಳಿಕೊಟ್ಟ ದೇವೇಗೌಡರು ಜೊತೆಗಿದ್ದಾರೆ ಎಂದು ಸೋಮಣ್ಣ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read