ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಗುಡ್ ನ್ಯೂಸ್ : ʻಜ್ಯೋತಿ ಸಂಜೀವಿನಿʼ ಯೋಜನೆ ವಿಸ್ತರಣೆ

ಬೆಳಗಾವಿ : ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ನೌಕರರ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಪರಿಷತ್‌ ನಲ್ಲಿ ಬಿಜೆಪಿಯ ಹೇಮಲತಾ ನಾಯಕ್‌ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೆ ತರಲಾಗಿದೆ. ಕ್ಯಾನ್ಸರ್‌, ಹೃದ್ರೋಗ ಸೇರಿ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಖರ್ಚಾದ ಹಣವನ್ನು ಸರ್ಕಾರ ಮರು ಪಾವತಿಸುತ್ತದೆ ಎಂದರು.

ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರಿಗೂ ವಿಸ್ತರಿಸುವ ಬಗ್ಗೆ ಹಣಕಾಸು ಲಭ್ಯತೆ ನೋಡಿಕೊಂಡು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read