HomeKarnatakaಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: 56 ಸಾವಿರ ಹುದ್ದೆಗಳ ಭರ್ತಿ

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: 56 ಸಾವಿರ ಹುದ್ದೆಗಳ ಭರ್ತಿ

ದಾವಣಗೆರೆ: ಈ ವರ್ಷ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯೋಗಾಕಾಂಕ್ಷಿಗಳಿಗೆ ಅಭಯ ನೀಡಿದ್ದಾರೆ.

ಸೋಮವಾರ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ 2.50 ಲಕ್ಷ ಉದ್ಯೋಗಗಳು ಖಾಲಿ ಇದ್ದು, ಇವುಗಳಲ್ಲಿ 40 ಸಾವಿರ ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಿದ್ದೇವೆ. ನೀಡಿದ ಭರವಸೆಯಂತೆ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳನ್ನು ಇದೇ ವರ್ಷ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವರ್ಷ ಹಂತ ಹಂತವಾಗಿ ಎಲ್ಲಾ ಹುದ್ದೆಗಳಿಗೂ ನೇಮಕಾತಿ ಪ್ರಕ್ರಿಯೆ ನಡೆಸಲಿದ್ದು, ಉದ್ಯೋಗಾಕಾಂಕ್ಷಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular