HomeKarnatakaಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪುತ್ರಿಯರ ವಿರುದ್ಧ ಅವಹೇಳನಕಾರಿ ಸಂದೇಶ: ದೂರು ದಾಖಲು

ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪುತ್ರಿಯರ ವಿರುದ್ಧ ಅವಹೇಳನಕಾರಿ ಸಂದೇಶ: ದೂರು ದಾಖಲು

ಬೆಂಗಳೂರು: ಸಿಎಂ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರ ಪುತ್ರಿಯರ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಾಕಾರಿ ಸಂದೇಶ ಹಾಕಿದ ವ್ಯಕ್ತಿ ವಿರುದ್ಧ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಪೊನ್ನಣ್ಣ ಅವರ ಪುತ್ರಿಯರ ವಿರುದ್ಧ ಪ್ರಚೋದನಾಕಾರಿ ಸಂದೇಶ ಹಾಕಿದ್ದ ಬಗ್ಗೆ ಕೆಪಿಸಿಸಿ ಪದಾಧಿಕಾರಿ ಬಿ.ಎನ್. ಆನಂದ್ ದೂರು ನೀಡಿದ್ದಾರೆ. ಇದರ ಅನ್ವಯ ದೊರೆ ಎಂಬತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

‘ಕೊಡಗಿನ ಸಮಸ್ಯೆಗಳು’ ಎನ್ನುವ ವಾಟ್ಸಾಪ್ ಗ್ರೂಪ್ ನಲ್ಲಿ ಏಪ್ರಿಲ್ 29ರಂದು ಕನ್ನಿಗುಂಡ ಅಮ್ಮಿ ಎಂಬುವರು ಕೆಲವು ಸಮಸ್ಯೆಗಳನ್ನು ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಗ್ರೂಪ್ನಲ್ಲಿಯೇ ಪ್ರತಿಕ್ರಿಯಿಸಿದ ದೊರೆ ಎಂಬ ವ್ಯಕ್ತಿ ಪೊನ್ನಣ್ಣ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಕಾದು ನೋಡಿ ಕರ್ಮ ರಿಟರ್ನ್ ಆಗಲಿದೆ ಎಂದು ಅವಹೇಳನಕಾರಿ ಮತ್ತು ಪ್ರಚೋದನಾಕಾರಿ ಸಂದೇಶ ಹಾಕಿದ್ದ. ಈ ಬಗ್ಗೆ ಆನಂದ್ ದೂರು ನೀಡಿದ್ದು, ಹೈಗ್ರೌಂಡ್ಸ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular