ಬೆಂಗಳೂರು: ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. 16 ಸಿಬ್ಬಂದಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಿಎಂ ಸಚಿವಾಲಯದ ಸಿಬಂದಿಗಳ ವಿರುದ್ಧ ಅನೇಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ 16 ಸಿಬ್ಬಮ್ದಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೂಲ ಇಲಾಖೆಗೆ ತೆರಳುವಂತೆ ಸೂಚಿಸಲಾಗಿದೆ.
ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ 9 ಸಿಬ್ಬಂದಿ, ಸಿಎಂ ಪರಿವಾರ ನಿಧಿ ವಿಭಾಗದ 7 ಸಿಬ್ಬಂದಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಮೂಲ ಇಲಾಖೆಗೆ ವರ್ಗಾವಣೆಗೊಳಿಸಿ ಸಿಎಂ ಉಪಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.