HomeKarnatakaBIG NEWS: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧೆ...?

BIG NEWS: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧೆ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್ ಸ್ಪರ್ಧಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕ್ಷೇತ್ರ ಹಂಚಿಕೆ ಜೊತೆಗೆ ಬಿಜೆಪಿಯಿಂದ ಡಾ.ಸಿ.ಎನ್ ಮಂಜುನಾಥ್ ಸ್ಪರ್ಧಿಸಲಿ ಎನ್ನುವ ಸಲಹೆ ಇದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಶಿವರಾತ್ರಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕ ಮುನಿರತ್ನ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಂಜುನಾಥ್ ಕೂಡ ಭಾಗವಹಿಸಲಿದ್ದಾರೆ. ಇದರೊಂದಿಗೆ ಲೋಕಸಭೆ ಚುನಾವಣೆ ಪ್ರಚಾರವೂ ಆರಂಭವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular