ಶಿವಮೊಗ್ಗ : 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳಿಗೆ ಡಿ. 11 ರಂದು ಬೆಳಗ್ಗೆ 10.00 ರಿಂದ ಬಿ.ಹೆಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಭಕ್ತಿಗೀತೆ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೋಪಕರಣ ತಯಾರಿಕಾ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ ಹಾಗೂ ಸಾಮಾನ್ಯ ಜ್ಞಾನ ಮತ್ತು ವಿಜ್ಞಾನ ವಿಷಯಗಳ ಕುರಿತು ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಭಾಗವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
