HomeKarnatakaನಾಳೆಯಿಂದ ಮೂರು ದಿನ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಾಳೆಯಿಂದ ಮೂರು ದಿನ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಕಡೆ ಗುಡುಗ ಸಹಿತ ಮಳೆಯಾಗುವ ಸಂಭವ ಇದೆ ಎನ್ನಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ, ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ ಸೇರಿ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular