HomeKarnatakaಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ತಲಾ 3 ಜಿಲ್ಲೆಗೆ ರೆಡ್, ಆರೆಂಜ್ ಅಲರ್ಟ್

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ತಲಾ 3 ಜಿಲ್ಲೆಗೆ ರೆಡ್, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದೆ. ಗುರುವಾರ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ ಮೂರು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾದಗಿರಿ, ಹಾಸನ, ಶಿವಮೊಗ್ಗ, ವಿಜಯಪುರ, ರಾಯಚೂರು, ಬೀದರ್, ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶುಕ್ರವಾರದಿಂದ ಮಳೆಯ ಪ್ರಭಾವ ಕಡಿಮೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular