ಕರಾವಳಿ ಜನತೆಗೆ ಸಿಹಿ ಸುದ್ದಿ: ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೆ ವಿಸ್ತರಣೆ

ಮಂಗಳೂರು: ಕರಾವಳಿ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಈಗ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.

ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಮಧ್ಯಾಹ್ನ 3.05ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ಮಂಗಳೂರಿಗೆ ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರದ ಆರು ದಿನಗಳ ಕಾಲ ಈ ವಂದೇ ಭಾರತ್ ರೈಲು ಸಂಚರಿಸುವುದರಿಂದ ಈ ಭಾಗದಲ್ಲಿ ಓಡಾಡುವ ಹಲವು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ನಮ್ಮ ಮನವಿಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಧನ್ಯವಾದ ಹೇಳಿದ್ದಾರೆ.

https://twitter.com/nalinkateel/status/1760294808957186475

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read