HomeAutoShocking Video | ಬೈಕಿನಲ್ಲಿ ಹೋಗುವಾಗಲೇ ಕಚ್ಚಿದ ಕಾಳಿಂಗ ಸರ್ಪ; ಸ್ಥಳದಲ್ಲೇ ಸಾವನ್ನಪ್ಪಿದ ಉರಗತಜ್ಞ

Shocking Video | ಬೈಕಿನಲ್ಲಿ ಹೋಗುವಾಗಲೇ ಕಚ್ಚಿದ ಕಾಳಿಂಗ ಸರ್ಪ; ಸ್ಥಳದಲ್ಲೇ ಸಾವನ್ನಪ್ಪಿದ ಉರಗತಜ್ಞ

ಉರಗ ತಜ್ಞನೊಬ್ಬ ತಾನು ಹಿಡಿದ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲು ತೆಗೆದುಕೊಂಡು ಬೈಕಿನಲ್ಲಿ ಹೋಗುವಾಗಲೇ ಅದು ಕಚ್ಚಿದ್ದು, ಇದರ ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದ್ದು, ಮನೀಶ್ ಎಂಬ ಉರಗತಜ್ಞ ತನ್ನ ಸ್ನೇಹಿತನ ಜೊತೆ ಕಾಳಿಂಗ ಸರ್ಪವನ್ನು ಕೈನಲ್ಲಿ ಹಿಡಿದುಕೊಂಡು ಬೈಕಿನಲ್ಲಿ ಹೋಗುತ್ತಿದ್ದ. ಈ ವೇಳೆ ಅದು ಏಕಾಏಕಿ ಮನೀಶ್ ಗೆ ಕಚ್ಚಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಗಾಬರಿಗೊಂಡ ಆತನ ಸ್ನೇಹಿತ ಬೈಕ್ ನಿಲ್ಲಿಸಲು ಮುಂದಾಗಿದ್ದು, ಅಷ್ಟರೊಳಗಾಗಿ ಮನೀಶ್ ಗೆ ವಿಷ ಏರಿದ್ದ ಪರಿಣಾಮ ಆತ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರೊಳಗಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಅಘಾತಕಾರಿ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular