ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಒಪ್ಪಿಗೆ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಶೇಕಡ 25ರಷ್ಟು ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವುದು.

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಈ ಬಗ್ಗೆ ಮಾಹಿತಿ ನೀಡಿದ್ದು, ಉಂಡೆ ಕೊಬ್ಬರಿಯ ಜೊತೆಗೆ ಮಿಲ್ಲಿಂಗ್ ಕೊಬ್ಬರಿಯನ್ನು ಕೂಡ ಬೆಂಬಲ ಬೆಲೆ ನೀಡಿ ಖರೀದಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಕೇಂದ್ರದಿಂದ ಅನುಮತಿ ನೀಡಲಾಗಿದ್ದು, ಉಂಡೆ ಕೊಬ್ಬರಿ ಮಾದರಿಯಲ್ಲಿಯೇ ಮಿಲ್ಲಿಂಗ್ ಕೊಬ್ಬರಿಯನ್ನು ಕೂಡ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಮಿಲ್ಲಿಂಗ್ ಕೊಬ್ಬರಿ ಶೇಕಡ 25ರಷ್ಟು ಮಾತ್ರ ಬೆಂಬಲ ಬೆಲೆ ಅಡಿ ಖರೀದಿಸಲಾಗುವುದು. 11,99,577 ಮೆಟ್ರಿಕ್ ಟನ್ ಮಿಲ್ಡಿಂಗ್ ಕೊಬ್ಬರಿ ಇಳುವರಿ ಅಂದಾಜಿಸಲಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಬೆಂಬಲ ಬೆಲೆ ನೀಡಿ 2999 ಮೆಟ್ರಿಕ್ ಟನ್ ಖರೀದಿಸಲಾಗುವುದು. ಶೀಘ್ರದಲ್ಲಿಯೇ ನೋಂದಣಿ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read