ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು  ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದಲ್ಲಿ ನಿಯಮ 69ರ ಚರ್ಚೆಯಲ್ಲಿ ತೆಂಗು ಮತ್ತು ಕೊಬ್ಬರಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿಂದ ಹಾಗೂ ಕನಿಷ್ಟ ಬೆಂಬಲ ಬೆಲೆಯೂ ಸಹ ಕಡಿಮೆಯಾಗುತ್ತಿರುವುದರಿಂದ ಬೆಂಬಲ ಬೆಲೆ ಹೆಚ್ಚಿಸುವ ಬಗ್ಗೆ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ಎಂ.ಟಿ. ಕೃಷ್ಣಪ್ಪ ಮುಂತಾದವರ ಚರ್ಚೆಗೆ   ಉತ್ತರಿಸಿದ ಸಚಿವರು, ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read