HomeKarnataka84 ತೆಂಗಿನ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

84 ತೆಂಗಿನ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ತುಮಕೂರು: ಜಮೀನು ವಿವಾದಕ್ಕೆ 84 ಸಸಿಗಳನ್ನು ತೆಂಗಿನ ಸಸಿಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಅಣೆಕಟ್ಟೆ ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.

ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಅಣೆಕಟ್ಟೆ ಗ್ರಾಮದಲ್ಲಿ ಎರೇಹಳ್ಳಿ ಸರ್ವೇ ನಂಬರ್ 21ರ ಸಾಗುವಳಿ ಜಮೀನಿನಲ್ಲಿ ಕೃತ್ಯ ನಡೆದಿದೆ. ಘಟನೆ ಸಂಬಂಧ ವಿಶ್ವನಾಥ್, ಕುಮಾರ್ ಎಂಬುವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಎಫ್ಐಆರ್ ದಾಖಲಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಲಾಗಿದೆ.

ಕಂಡವರ ಜಮೀನಿಗೆ ಹೋದರೆ ಹೀಗೆ ಮಾಡೋದು ಎಂದು ಪೋಸ್ಟ್ ಹಾಕಲಾಗಿದೆ. ಕೃತ್ಯದ ಬಳಿಕ ಆರೋಪಿ ಕುಮಾರ್ ಫೇಸ್ಬುಕ್ ಪೋಸ್ಟ್ ಮಾಡಿರುವುದಾಗಿ ಆರೋಪಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular