HomeKarnatakaತೆಂಗಿನ ಮರದಿಂದ ಬಿದ್ದು ಮಹಿಳೆ ಸಾವು

ತೆಂಗಿನ ಮರದಿಂದ ಬಿದ್ದು ಮಹಿಳೆ ಸಾವು

ಮಂಗಳೂರು: ತೆಂಗಿನಕಾಯಿ ಕೀಳುತ್ತಿದ್ದ ಮಹಿಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಸವಣೂರು ಸಮೀಪ ನಡೆದಿದೆ.

ಪ್ರವೀಣ್ ಬಳ್ಳಾಜೆ ಅವರ ಪತ್ನಿ ಸುಚಿತ್ರಾ(34) ಮೃತಪಟ್ಟವರು. ವೃತ್ತಿನಿರತ ತೆಂಗಿನ ಕಾಯಿ ಕೀಳುವ ಮಹಿಳೆಯಾಗಿದ್ದ ಸುಚಿತ್ರಾ ಕೆಲವು ವರ್ಷಗಳಿಂದ ಈ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ತೆಂಗಿನ ಮರ ಹತ್ತಿ ಕಾಯಿ ಕೀಳುವ ಸಂದರ್ಭದಲ್ಲಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ. ಮಹಿಳೆಯಾಗಿದ್ದರೂ ತೆಂಗಿನ ಮರ ಹತ್ತಿ ಕಾಯಿ ಕೀಳುತ್ತಿದ್ದ ಸುಚಿತ್ರಾ ಅವರನ್ನು ಗುರುತಿಸಿ ಹಲವು ಸಂಘ ಸಂಸ್ಥೆಗಳು ಗೌರವಿಸಿದ್ದವು. ಪತಿ ಹಾಗೂ ಇಬ್ಬರು ಮಕ್ಕಳನ್ನು ಸುಚಿತ್ರಾ ಅಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular