HomeLatest NewsBIG NEWS: ಶೀತಗಾಳಿ ಹಿನ್ನೆಲೆ: 5 ಜಿಲ್ಲೆಗಳಲ್ಲಿ ಆರೇಂಜ್, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

BIG NEWS: ಶೀತಗಾಳಿ ಹಿನ್ನೆಲೆ: 5 ಜಿಲ್ಲೆಗಳಲ್ಲಿ ಆರೇಂಜ್, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಚಳಿ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇನ್ನೆರಡು ದಿನಗಳಲ್ಲಿ ಶೀತಗಾಳಿ ಬೀಸಲಿದ್ದು, ತಾಪಮಾನ ತೀವ್ರವಾಗಿ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ. ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9ರಿಂದ 12 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ 12ರಿಂದ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಭಾರತದಿಂದ ಒಣ ಹವೆ ಪ್ರವೇಶಿಸಿರುವುದೇ ರಾಜ್ಯದಲ್ಲಿ ಶೀತಗಾಳಿ ಹೆಚ್ಚಲು ಕಾರಣವಾಗಿದೆ. ಡಿಸೆಂಬರ್ 17ರ ಬಳಿಕ ಚಳಿ ಪ್ರಮಾಣ ಕೊಂಚ ಕಡಿಮೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular