ಭಾರಿ ಚಳಿ ಹಿನ್ನಲೆ ಜ. 15 ರವರೆಗೆ ಶಾಲೆಗಳಿಗೆ ರಜೆ ಘೋಷಣೆ: ಭಾರಿ ಚಳಿಗೆ ಬೆಚ್ಚಿಬಿದ್ದ ಉತ್ತರ ಭಾರತ; ರಕ್ತ ಹೆಪ್ಪುಗಟ್ಟಿ ಮೆದುಳು, ಹೃದಯಾಘಾತದಿಂದ ಜನ ಸಾವು

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರಿ ಚಳಿಗಾಳಿ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಉತ್ತರ ಪ್ರದೇಶದ ಲಖ್ನೋದಲ್ಲಿ ಜನವರಿ 14ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಖಾಸಗಿ ಶಾಲೆಗಳಿಗೆ ಜನವರಿ 15ರವರೆಗೆ ರಜೆ ಘೋಷಿಸಲಾಗಿದೆ.

ಉತ್ತರ ಭಾರತದಲ್ಲಿ ತೀವ್ರ ಚಳಿಯಿಂದ ಜನರಲ್ಲಿ ರಕ್ತದೊತ್ತಡದಲ್ಲಿ ಏರುಪೇರು ಆಗುತ್ತಿದ್ದು, ರಕ್ತ ಹೆಪ್ಪುಗಟ್ಟಿ, ಮೆದುಳು, ಹೃದಯ ಆಘಾತವಾಗಿ ಜನ ಸಾವಿಗೀಡಾಗುತ್ತಿದ್ದಾರೆ. ವೃದ್ಧರು ಮಾತ್ರವಲ್ಲ, ಮಧ್ಯವಯಸ್ಕರೂ ಹೃದಯಾಘಾತ, ಮೆದುಳಿನ ಸಮಸ್ಯೆಗೆ ಒಳಗಾಗುತ್ತಿದ್ದಾರೆ.

ಭಾರಿ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದು, ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿ ಒಂದು ವಾರದ ಅವಧಿಯಲ್ಲಿ ಭಾರಿ ಚಳಿಯಿಂದ 98 ಜನಮೃತಪಟ್ಟಿದ್ದಾರೆ. ಕನಿಷ್ಠ ತಾಪಮಾನ 4ರಿಂದ 6 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಭಾರಿ ಚಳಿಯ ಕಾರಣ ರಕ್ತದೊತ್ತಡದಲ್ಲಿ ಏರುಪೇರಾಗಿ ಹೃದಯಾಘಾತ ಸಂಭವಿಸುತ್ತಿದೆ. ರೈಲು ಮತ್ತು ವಿಮಾನ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಿದೆ ಎಂದು ಹೇಳಲಾಗಿದೆ.

ಭಾರಿ ಚಳಿ ಮತ್ತು ದಟ್ಟ ಮಂಜು ಆವರಿಸಿರುವುದರಿಂದ ಹಲವೆಡೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ದೆಹಲಿಯ ವಿವಿಧ ಪ್ರದೇಶಗಳಲ್ಲಿ ದಟ್ಟ ಮಂಜಿನಿಂದ ಸಂಚಾರದಲ್ಲಿ ವ್ಯತ್ಯಯವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಬಿಹಾರ, ಹರಿಯಾಣ, ಪಂಜಾಬ್ ಸೇರಿದಂತೆ ಹಲವೆಡೆ ಭಾರಿ ಚಳಿ, ಶೀತಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read