HomeLatest NewsWeather Report: ಶೀತಗಾಳಿ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Weather Report: ಶೀತಗಾಳಿ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಶೀತಗಾಳಿ ಹೆಚ್ಚುತ್ತಿದ್ದು, ಮೈಕೊರೆವ ಚಳಿ ಜನರನ್ನು ನಡಿಗಿಸುತ್ತಿದೆ. ಕೆಲ ಜಿಲ್ಲೆಗಳಲ್ಲಿ ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ ದಟ್ಟ ಮಂಜು ಕವಿದಿದ್ದು, ಚಳಿ ಪ್ರಮಾಣ ಹೆಚ್ಚಳವಾಗಿದೆ. ಶೀತಗಾಳಿ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಶೀತಗಾಳಿ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಯಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ದಾವಣಗೆರೆ, ಹಾವೇರಿ, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದ ಅಲೆ ಹೆಚ್ಚುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಇದೇ ರೀತಿ ವಾತಾವರಣ ಮುಂದುವರೆಯಲಿದೆ. ಜನರು ಬೆಚ್ಚನೆಯ ಉಡುಪಿ ಧರಿಸಿ, ಸುರಕ್ಷಿತವಾಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಕೋಲಾರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲು ಒಣ ಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular