HomeKarnatakaBIG NEWS: ಶೀತಗಾಳಿ, ಮಳೆ ಎಚ್ಚರಿಕೆ: ಸಾರ್ವಜನಿಕರು, ವಯೋವೃದ್ಧರು ಮುನ್ನೆಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

BIG NEWS: ಶೀತಗಾಳಿ, ಮಳೆ ಎಚ್ಚರಿಕೆ: ಸಾರ್ವಜನಿಕರು, ವಯೋವೃದ್ಧರು ಮುನ್ನೆಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಲಲ್ಲಿ ಶೀತ ಗಾಳಿ, ಧಾರಾಕಾರ ಮಳೆ ಸುರಿಯುತ್ತಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇದರ ಜೊತೆಗೆ ಶೀತಗಾಳಿಯಿಂದಾಗಿ ಜನರು ನಡುಗುವಂತಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ತುಂತುರು ಮಳೆ ಹಾಗೂ ಶೀತಗಾಳಿ ಹಿನ್ನೆಲೆಯಲ್ಲಿ ಮಕ್ಕಳು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿವಶಂಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿಯೂ ಅತಿಯಾದ ಚಳಿ, ಶೀತಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಬೆಚ್ಚಗಿನ ಉಡುಪುಗಳನ್ನು ಧರಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅವಶ್ಯವಿದ್ದರಷ್ಟೇ ಮನೆಯಿಂದ ಹೊರ ಹೋಗಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಯೋವೃದ್ದರು ಅನಾರೋಗ್ಯ ಪೀಡಿತರು ಆದಷ್ಟು ಮನೆಯಲ್ಲಿಯೇ ಇದ್ದು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು

ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸುವ ಕೃಷಿಕರು ಮುಂಜಾಗ್ರತೆ ವಹಿಸುವ ಮೂಲಕ ಕೃಷಿ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಮನವಿ ಮಾಡಿದ್ದಾರೆ

ತೀವ್ರ ಛಳಿ ಹಿನ್ನಲೆಯಲ್ಲಿ ಇಂದು (2 – 12 – 2024) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಒಂದು ದಿನ ರಜೆ ಫೋಷಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular