HomeLatest NewsWeather Report: ಶೀತದಲೆ ಹಿನ್ನೆಲೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Weather Report: ಶೀತದಲೆ ಹಿನ್ನೆಲೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು, ಮೈಕೊರೆವ ಚಳಿ ಪ್ರಮಾಣವೂ ಹೆಚ್ಚಿದೆ. ಶೀತದಲೆ ಹಿನ್ನೆಲೆಯಲ್ಲಿ ಕಲಬುರಗಿ, ಬೀದರ್ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಒಣಹವೆ ಚಳಿ ಮುಂದುವರೆಯಲಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಒಣಹವೆ ಇದ್ದು ಇಂದೂ ಕೂಡ ಒಣ ಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular