HomeUncategorizedWeather Report: ರಾಜ್ಯದ ಉತ್ತರ ಒಳನಾಡಿನಲ್ಲಿ ಶೀತಗಾಳಿ ಎಚ್ಚರಿಕೆ: ದಕ್ಷಿಣ ಒಳನಾಡಿನಲ್ಲಿ ಮೈಕೊರೆವ ಚಳಿ

Weather Report: ರಾಜ್ಯದ ಉತ್ತರ ಒಳನಾಡಿನಲ್ಲಿ ಶೀತಗಾಳಿ ಎಚ್ಚರಿಕೆ: ದಕ್ಷಿಣ ಒಳನಾಡಿನಲ್ಲಿ ಮೈಕೊರೆವ ಚಳಿ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉತ್ತರ ಒಳನಡಿನಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮೈಕೊರೆವ ಚಳಿ ಆರಂಭವಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲಿ ಶೀತಗಾಳಿ ಬೀಸಲಿದೆ. ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾಸನ, ಚಾಮರಾಜನಗರ, ಕೋಲಾರ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿಯ ಪ್ರಮಾಣ ಹೆಚ್ಚಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಭಾರಿ ಚಳಿ ಹೆಚ್ಚಿದ್ದು, ಒಣ ಹವೆ ಇರಲಿದೆ. ಬೆಂಗಳೂರಿನಲ್ಲಿಂದು ಮಂಜು ಮುಸುಕಿದ ವಾತಾವರಣವಿರಲಿದ್ದು, ಚಳಿಯ ಅಬ್ಬರ ಹೆಚ್ಚಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular