HomeKarnatakaBIG NEWS: ರಾಜ್ಯ ಹೆದ್ದಾರಿ ಮೇಲೆ ಕುಸಿದ ಗುಡ್ಡ : ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ...

BIG NEWS: ರಾಜ್ಯ ಹೆದ್ದಾರಿ ಮೇಲೆ ಕುಸಿದ ಗುಡ್ಡ : ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ ಬಂದ್; ಪ್ರಯಾಣಿಕರ ಪರದಾಟ

ಹಾಸನ: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ರಾಜ್ಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ರಸ್ತೆ ಮಾರ್ಗವೇ ಸಂಪೂರ್ಣ ಬಂದ್ ಆಗಿರುವ ಘಟನೆ ಸಕಲೇಶಪುರದ ಬಿಸಿಲೆ ಮಾರ್ಗದಲ್ಲಿ ನಡೆದಿದೆ.

ಹಾಸನ ಜಿಲ್ಲೆಯಾದ್ಯಂತ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸುತ್ತಿದೆ. ಈ ನಡುವೆ ಸಕಲೇಶಪುರ ತಾಲೂಕಿನ ಬಿಸಿಲೆ ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದ್ದು, ಭಾರಿ ಪ್ರಮಾಣದಲ್ಲಿ ಮಣ್ಣು, ಮರಗಳು ರಸ್ತೆ ಮೇಲೆ ಬಿದ್ದಿವೆ. ಇದರಿಂದಾಗಿ ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ ಬಂದ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆಗೆ ಮಣ್ಣು ಕುಸಿದು ಬಿದ್ದಿರುವುದರಿಂದ ಈ ಭಾಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದೇ ಮಾರ್ಗದಲ್ಲಿ ತೆರಳಿರುವ ಸಾವಿರಾರು ಪ್ರಯಾಣಿಕರು ದಾರಿಯಿಲ್ಲದೇ ಪರದಾಡಿದ್ದಾರೆ. ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೂ ಅಡ್ಡಿಯುಂಟಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular