ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಕಾಲೇಜು ಪಿಜಿ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಎಂಸಿಎ, ಎಂಬಿಎ ಒಳಗೊಂಡಂತೆ ಸ್ನಾತಕೋತ್ತರ ಪದವಿಗೆ 2023 -24ನೇ ಸಾಲಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಹಿಂದಿನ ಶುಲ್ಕವೇ ಅನ್ವಯವಾಗಲಿದೆ.

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಿಸಲಾದ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ 2019 -20 ನೇ ಸಾಲಿನಲ್ಲಿದ್ದ ಶುಲ್ಕವನ್ನು ಮುಂದಿನ ವರ್ಷಗಳಲ್ಲೂ ಮುಂದುವರೆಸಲಾಗಿದ್ದು, 2023 -24ನೇ ಸಾಲಿಗೂ ಅದೇ ಶುಲ್ಕವನ್ನೇ ನಿಗದಿಪಡಿಸಲಾಗಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿ ಮತ್ತು ಪೋಷಕರಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಶುಲ್ಕ ಹೆಚ್ಚಳ ಮಾಡಿಲ್ಲವೆಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read