ಮಂಗಳೂರು: ಕಾಲೇಜು ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಬ್ ಇನ್ಸ್ಪೆಕ್ಟರ್ ಪುತ್ರನನ್ನು ಬಂಧಿಸಲಾಗಿದೆ.
ಕಟ್ಟತಡ್ಕ ನಿವಾಸಿ ರಿಕ್ಷಾ ಚಾಲಕ ಮಂಜುನಾಥ್ ಬಂಧಿತ ಆರೋಪಿ. ಈತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 2024ರ ಆಗಸ್ಟ್ ನಲ್ಲಿ ಕಾಲೇಜಿಗೆ ರಜೆ ಇದ್ದ ಕಾರಣ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಗೆ ಪರಿಚಯವಿರುವ ಮಂಜುನಾಥ್ ನೀರು ಕೇಳುವ ನೆಪದಲ್ಲಿ ಆಗಮಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.
ನಂತರ ಹಲವಾರು ಬಾರಿ ಬೆದರಿಕೆ ಹಾಕಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಕೆಲ ಸಮಯದಿಂದ ಬಾಲಕಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಏಪ್ರಿಲ್ 5 ರಂದು ತಾಯಿಯೊಂದಿಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಹೋದಾಗ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ನಂತರ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.