ಉತ್ತರಪ್ರದೇಶದ ರಾಜನಗರ ಎಕ್ಸ್ ಟೆನ್ಶನ್‌ನ ಬೀದಿಗಳಲ್ಲಿ ಕಾರಿನಲ್ಲಿ ಅಪಾಯಕಾರಿ ಸ್ಟಂಟ್ ಮಾಡುತ್ತಿದ್ದ ನಾಲ್ವರು ಕಾಲೇಜು ವಿದ್ಯಾರ್ಥಿಗಳನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಸ್ಟಂಟ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿತ್ತು. ಬಳಿಕ ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ.
ಕಾಲೇಜು ವಿದ್ಯಾರ್ಥಿಗಳು ಚಾಲನೆ ಮಾಡುತ್ತಿದ್ದ ಮಾರುತಿ ಬ್ರೆಜ್ಜಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಾಲ್ವರು ಕಾರ್ ನ ಕಿಟಕಿಯಲ್ಲಿ ನೇತಾಡುತ್ತಿದ್ದ ದೃಶ್ಯ ವೈರಲ್ ಆಗಿತ್ತು.
ಇಪ್ಪತ್ತಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಮೌಲ್ಯಮಾಪನ ಮಾಡಿದ ನಂತರ ಪೊಲೀಸರು ವಿದ್ಯಾರ್ಥಿಗಳನ್ನು ಗುರುತಿಸಿ ಬಂಧಿಸಿದ್ದಾರೆ.
ಕೌಶರ್ ರೆಹಮಾನ್, ಕೃಷ್ಣ ಅಂಕನ್, ತುಷಾರ್ ಸಿಂಗ್ ಮತ್ತು ಅಶುತೋಷ್ ಬಂಧಿತ ಆರೋಪಿಗಳು.
https://twitter.com/anchorankitapal/status/1655494038051782659?ref_src=twsrc%5Etfw%7Ctwcamp%5Etweetembed%7Ctwterm%5E1655494038051782659%7Ctwgr%5E5e93821c3a8e3371f77cfbd68122ba02d2935dd7%7Ctwcon%5Es1_&ref_url=https%3A%2F%2Fwww.dnaindia.com%2Fviral%2Freport-watch-college-students-detained-for-performing-dangerous-stunts-in-car-in-ghaziabad-viral-video-3041295