BIG NEWS: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದಿದ್ದಕ್ಕೆ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಮಂಗಳೂರು: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣಕ್ಕೆ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಸಂಪ್ಯದಲ್ಲಿ ಈ ದುರಂತ ಸಂಭವಿಸಿದ್ದು, ನಿಶಾ (17) ಆತ್ಮಹತ್ಯೆ ಮಾಡಿಕೊಂಡವಳು. ನಿಶಾ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು.

2 ವಾರದ ಹಿಂದೆ ಬಿಹಾರದಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿತ್ತು. ರನ್ನಿಂಗ್ ರೇಸ್ ನಲ್ಲಿ ನಿಶಾ ಭಾಗವಹಿಸಿದ್ದಳು. ಆದರೆ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ತೀವ್ರವಾಗಿ ಬೇಸರಗೊಂಡಿದ್ದ ನಿಶಾ, ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ನೋವಿನಲ್ಲಿ ತೋಟಕ್ಕೆ ಸಿಂಪಡಿಸುವ ಕೀಟನಾಶಕ ಸೇವಿಸಿದ್ದ ನಿಶಾ ವಾಂತಿ ಮಾಡುತ್ತಾ ತೀವ್ರವಾಗಿ ಬಳಲಿದ್ದಳು.

ಪೋಷಕರು ವಿದ್ಯಾರ್ಥಿನಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಕಳೆದ ಒಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read