HomeKarnatakaBREAKING : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ನೀಡಿದ...

BREAKING : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ನೀಡಿದ ಕೋರ್ಟ್

ಉಡುಪಿ : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್ ಜಾಮೀನು ನೀಡಿದೆ.

ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ವಕೀಲರ ಮೂಲಕ ಉಡುಪಿ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಉಡುಪಿ ಕೋರ್ಟ್ ಜಾಮೀನು ನೀಡಿದೆ. ವಿದ್ಯಾರ್ಥಿನಿಯರಾದ ಶಬನಾಜ್, ಅಲ್ಫಿಯಾ, ಆಲಿಮಾತುಲ್  ಶಾಫಿಯಾಗೆ  ಕೋರ್ಟ್ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು, ಮಹಿಳಾ ಮೋರ್ಚಾ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತೀವ್ರ ಪ್ರತಿಭಟನೆ ನಡೆಸಿದೆ. ಘಟನೆ ಸಂಬಂಧ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಸದಾಶಿವನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವಿಚಾರ ರಾಜಕೀಯ ನಾಯಕರುಗಳ ಪರಸ್ಪರ ವಾಗ್ವಾದಕ್ಕೂ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅದನ್ನ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ ಎನ್ನಲಾಗಿದ್ದು, ಇದು ಗೊತ್ತಾದ ಬಳಿಕ ಮತ್ತೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಮೂವರು ವಿದ್ಯಾರ್ಥಿನಿಯರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿತ್ತು. . ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅದನ್ನ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ ಎನ್ನಲಾಗಿದ್ದು, ಇದು ಗೊತ್ತಾದ ಬಳಿಕ ಮತ್ತೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular