HomeKarnatakaಹೆಚ್ಚುವರಿ ಪೆಟ್ರೋಲ್ ಇಲ್ಲ: ಬಂಕ್ ಮಾಲೀಕರಿಗೆ ಖಡಕ್ ಸೂಚನೆ

ಹೆಚ್ಚುವರಿ ಪೆಟ್ರೋಲ್ ಇಲ್ಲ: ಬಂಕ್ ಮಾಲೀಕರಿಗೆ ಖಡಕ್ ಸೂಚನೆ

ಪಶ್ಚಿಮ ರಾಷ್ಟ್ರಗಳಲ್ಲಿನ ಸಂಘರ್ಷದ ಕಾರಣ ಗ್ಯಾಸ್ ಸಿಗುತ್ತಿಲ್ಲ. ಈಗ ಪೆಟ್ರೋಲ್ ಮತ್ತು ಡೀಸೆಲ್ ಸಿಗುವುದಿಲ್ಲ ಎಂಬ ಸುದ್ದಿಗಳು ವೈರಲ್ ಆಗುತ್ತಿದೆ. ಜನರು ಪ್ಲಾಸ್ಟಿಕ್ ಕ್ಯಾನ್ ಹಿಡಿದು ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.

ಆದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಧಾರವಾಡ ಎಸ್‌ಪಿ ಗುಂಜನ್‌ ಆರ್ಯ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಜನರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಪ್ರಕಟಣೆಯ ವಿವರಗಳು: ನಿನ್ನೆ ರಾತ್ರಿಯಿಂದ ಧಾರವಾಡ ಜಿಲ್ಲೆಯ ವಿವಿಧ ಪೆಟ್ರೋಲ್ ಬಂಕ್‌ಗಳಲ್ಲಿ ಆಸಾಮಾನ್ಯ ಗದ್ದಲ ಉಂಟಾಗಿದ್ದು, ನಾಗರೀಕರು ಪೆಟ್ರೋಲ್‌ ಮತ್ತು ಡಿಸೇಲ್‌ ಅನ್ನು ಆತಂಕದಿಂದ ಹೆಚ್ಚಾಗಿ ಖರೀದಿಸುತ್ತಿರುವುದು ಗಮನಕ್ಕೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ, ಜಿಲ್ಲಾಡಳಿತವು ಧಾರವಾಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಪೆಟ್ರೋಲಿಯಂ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಅವರ ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್‌ ಕೂರತೆ ಇಲ್ಲದೇ ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದೆ ಎಂದು ತಿಳಿಸಲಾಗಿದೆ.

ಆದ್ದರಿಂದ ನಾಗರೀಕರು ಅನಾವಶ್ಯಕವಾಗಿ ಆತಂಕದಿಂದ ಇಂಧನ ಸಂಗ್ರಹ ಮಾಡಬಾರದು ಎಂದು ವಿನಂತಿಸಲಾಗುತ್ತಿದೆ. ಇಂತಹ ವರ್ತನೆಗಳು ಸರಬರಾಜು ವ್ಯವಸ್ಥೆಯನ್ನು ಅಸ್ತವ್ಯಸ್ಥ ಗೊಳಿಸಬಹುದು.

ಇನ್ನು ಮುಂದೆ, ಪೆಟ್ರೋಲಿಯಂ ಕಾಯಿದೆ 1934 ಹಾಗೂ ಪೆಟ್ರೋಲಿಯಂ ನಿಯಮಗಳು 2002 ಪ್ರಕಾರ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪೆಟ್ರೋಲ್ ಮಾರಾಟ ಮಾಡುವುದು ಸಂಪೂರ್ಣ ನಿಷೇಧಿತವಾಗಿದೆ.

ಏಕೆಂದರೆ ಇದು ಗಂಭೀರ ಸುರಕ್ಷತಾ ಅಪಾಯವನ್ನು ಉಂಟುಮಾಡುತ್ತದೆ. ಆದ್ದರಿಂದ ಧಾರವಾಡ ಜಿಲ್ಲೆಯಲ್ಲಿನ ಎಲ್ಲಾ ಪೆಟ್ರೋಲ್ ಬಂಕ್‌ ಮಾಲೀಕರು ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪೆಟ್ರೋಲ್ ಮಾರಾಟ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದ ಅಧಿಕಾರಿಗಳಿಂದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ನಾಗರೀಕರು ಪೆಟ್ರೋಲ್ ಬಂಕ್‌ಗಳಲ್ಲಿ ಶಿಸ್ತಿನಿಂದ ನಡೆದುಕೊಳ್ಳಬೇಕು ಹಾಗೂ ಪಂಪ್ ಸಿಬ್ಬಂದಿ ಮತ್ತು ಇತರೇ ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಶಾಂತಿ ಮತ್ತು ವ್ಯವಸ್ಥೆಯನ್ನು ಕಾಪಾಡಲು ಎಲ್ಲರ ಸಹಕಾರ ಕೋರಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular