HomeKarnatakaಕೊನೆ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶ ನೀಡಿದ ಕಾಲೇಜಿಗೆ 5 ಲಕ್ಷ ರೂ. ದಂಡ

ಕೊನೆ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶ ನೀಡಿದ ಕಾಲೇಜಿಗೆ 5 ಲಕ್ಷ ರೂ. ದಂಡ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿಗದಿಪಡಿಸಿದ್ದ ಕೊನೆಯ ದಿನಾಂಕ ಮುಗಿದ ನಂತರ ವಿದ್ಯಾರ್ಥಿಗೆ ಪ್ರವೇಶಾತಿ ಮಾಡಿಕೊಂಡ ಕಾಲೇಜಿಗೆ ಹೈಕೋರ್ಟ್ ದಂಡ ವಿಧಿಸಿದೆ.

ಮಂಗಳೂರು ಮೂಲದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ವಿವಿ ನಿಗದಿಪಡಿಸಿದ್ದ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶಾತಿ ನೀಡಿದ ಹಿನ್ನೆಲೆಯಲ್ಲಿ ಮುಂದಿನ ವರ್ಷ ಒಂದು ಮ್ಯಾನೇಜ್ಮೆಂಟ್ ಕೋಟಾದ ಸೀಟನ್ನು ಸರ್ಕಾರಕ್ಕೆ ಬಿಟ್ಟು ಕೊಡಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ತನ್ನ ಪ್ರವೇಶವನ್ನು ಅನುಮೋದಿಸದ ಕ್ರಮ ಪ್ರಶ್ನಿಸಿ ಕಾಲೇಜಿನ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

ವಿವಿಗೆ ಕಾಲೇಜು 5 ಲಕ್ಷ ರೂ. ದಂಡಪಾವತಿಸಬೇಕು. ಇನ್ನು ಮುಂದೆ ದಿನಾಂಕ ಮುಗಿದ ನಂತರ ಯಾವುದೇ ವಿದ್ಯಾರ್ಥಿಯನ್ನು ಅಡ್ಮಿಷನ್ ಮಾಡಿಕೊಳ್ಳುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಡಬೇಕು. ಅವಧಿ ಮುಗಿದ ನಂತರವೂ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಂಡರೆ ತನಿಖೆ ನಡೆಸಲು ವಿಶ್ವವಿದ್ಯಾಲಯ ಸ್ವತಂತ್ರವಾಗಿದೆ. ಅಗತ್ಯವಾದರೆ ಕಾಲೇಜಿನ ಮಾನ್ಯತೆಯನ್ನು ಸಹ ಹಿಂಪಡೆಯಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular