BREAKING: ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ ಮೇಲೆ ಗುಂಡಿನ ದಾಳಿ | SHOCKING VIDEO

ಬೊಗೋಟಾದಲ್ಲಿ ನಡೆದ ರ್ಯಾಲಿಯಲ್ಲಿ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಟರ್ಬೆ ಮೇಲೆ ಗುಂಡು ಹಾರಿಸಲಾಗಿದೆ.

ಶನಿವಾರ ಬೊಗೋಟಾದಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ವಿರೋಧ ಪಕ್ಷದ ಸೆನೆಟರ್ ಮಿಗುಯೆಲ್ ಉರಿಬೆ ಟರ್ಬೆ ಮೇಲೆ ಗುಂಡು ಹಾರಿಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಫಾಂಟಿಬಾನ್ ಜಿಲ್ಲೆಯ ಮಾಡೆಲಿಯಾ ನೆರೆಹೊರೆಯಲ್ಲಿರುವ ಎಲ್ ಗಾಲ್ಫಿಟೊ ಪಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಉರಿಬೆ ಬೆಂಬಲಿಗರ ಗುಂಪನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಫೈರಿಂಗ್ ಮಾಡಲಾಗಿದೆ.

ಬಲಪಂಥೀಯ ಡೆಮಾಕ್ರಟಿಕ್ ಸೆಂಟರ್ ಪಕ್ಷದ ಪ್ರಮುಖ ವ್ಯಕ್ತಿ ಮತ್ತು ಮುಂದಿನ ವರ್ಷದ ಅಧ್ಯಕ್ಷೀಯ ಸ್ಪರ್ಧೆಯ ಸ್ಪರ್ಧಿಯಾಗಿರುವ ಉರಿಬೆ ಅವರ ಮೇಲೆ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಗುಂಡು ಹಾರಿಸಿ, ಬೆನ್ನಿಗೆ ಹೊಡೆದಿದ್ದಾನೆ. ಶಂಕಿತನ ಗುರುತು ಅಥವಾ ಉದ್ದೇಶವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ, ಆದರೆ ಉರಿಬೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದಾರೆ.

ಶಂಕಿತ ಗುಂಡು ಹಾರಿಸಿದ ವ್ಯಕ್ತಿಯನ್ನು ಸೆರೆಹಿಡಿಯಲಾಗಿದೆ. ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ ಎಂದು ಬೊಗೋಟಾ ಮೇಯರ್ ಕಾರ್ಲೋಸ್ ಗಾಲನ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read