ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧಿಸಲಾಗಿದೆ.
ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.