ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶವನ್ನು ಮೇ 1 ರಿಂದ ಪುನರಾರಂಭಿಸಲಾಗುತ್ತಿದೆ.
ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏಪ್ರಿಲ್ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮುಂದಿನ ತಿಂಗಳಿಂದ ಮತ್ತೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

You Might Also Like
TAGGED:Jog falls