HomeLatest Newsಖಾಸಗಿ ಕಾಲೇಜ್ ಗಳಲ್ಲಿ ಇಂಜಿನಿಯರಿಂಗ್ ಪ್ರವೇಶ: ಜೂನ್ 7 ರಂದು ಕಾಮೆಡ್-ಕೆ ಪರೀಕ್ಷೆ ಫಲಿತಾಂಶ ಪ್ರಕಟ

ಖಾಸಗಿ ಕಾಲೇಜ್ ಗಳಲ್ಲಿ ಇಂಜಿನಿಯರಿಂಗ್ ಪ್ರವೇಶ: ಜೂನ್ 7 ರಂದು ಕಾಮೆಡ್-ಕೆ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್ 7 ರಂದು ಕಾಮೆಡ್-ಕೆ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಆಪರೇಷನ್ ಸಿಂಧೂರ ಹಿನ್ನೆಲೆಯಲ್ಲಿ ಏಳು ರಾಜ್ಯಗಳಲ್ಲಿ ಮುಂದೂಡಿಕೆಯಾಗಿದ್ದ ಕಾಮೆಡ್-ಕೆ ಯುಜಿಇಟಿ ಹಾಗೂ ಯೂನಿಗೇಜ್ ಪರೀಕ್ಷೆ ಭಾನುವಾರ ನಡೆದಿದೆ.

ಮೇ 10 ಮತ್ತು 20ರಂದು ಎರಡು ಹಂತದಲ್ಲಿ ನಡೆದ ಪರೀಕ್ಷೆ ಫಲಿತಾಂಶ ಹಾಗೂ ರ್ಯಾಂಕ್ ಪಟ್ಟಿ ಜೂನ್ 7 ರಂದು ಪ್ರಕಟಿಸಲಾಗುವುದು ಎಂದು ಕಾಮೆಡ್-ಕೆ ಮಾಹಿತಿ ನೀಡಿದೆ.

ಖಾಸಗಿ ಇಂಜಿನಿಯರಿಂಗ್ ಕಾಲೇಜು ಗಳಲ್ಲಿ ಸೀಟುಗಳ ಭರ್ತಿಗೆ 18 ರಾಜ್ಯಗಳಲ್ಲಿ ಕಾಮೆಡ್-ಕೆ ಯುಜಿಇಟಿ ನಿಗದಿಪಡಿಸಿದ್ದು, ಆಪರೇಷನ್ ಸಿಂಧೂರ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ. ಉತ್ತರಾಖಂಡ್, ದೆಹಲಿ, ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣದಲ್ಲಿ ಪರೀಕ್ಷೆ ಮುಂದೂಡಲಾಗಿತ್ತು. ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದೂಡಿಕೆಯಾಗಿದ್ದ ರಾಜ್ಯಗಳ 22 ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 6639 ವಿದ್ಯಾರ್ಥಿಗಳಲ್ಲಿ 4335 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಎರಡು ಹಂತದಲ್ಲಿ ಪರೀಕ್ಷೆಗೆ ಸಂಬಂಧಿಸಿದ ತಾತ್ಕಾಲಿಕ ಸರಿ ಉತ್ತರಗಳನ್ನು ಮೇ 28 ರಂದು ಕಾಮೆಡ್-ಕೆ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಆಕ್ಷೇಪಣಿಗಳಿದ್ದಲ್ಲಿ ಸಲ್ಲಿಸಬಹುದು. ಜೂನ್ 7 ರಂದು ಅಂತಿಮ ಕೀ ಉತ್ತರ, ರ್ಯಾಂಕಿಂಗ್ ಪಟ್ಟಿಯೊಂದಿಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular