
ಸದ್ಯ, ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದ್ದು, ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಹಲವು ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಬ್ಯಾಂಕ್ ಜನಾರ್ಧನ್ ಆರೋಗ್ಯ ವಿಚಾರಿಸಿದ್ದಾರೆ.
ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದ್ದು, ಹಲವಾರು ಸಿನಿಮಾಗಳಲ್ಲಿ ತಮ್ಮ ಅದ್ಬುತ ನಟನೆಯ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರು ಬೇಗ ಗುಣಮುಖರಾಗಿ ಬರಲೆಂದು ಅಭಿಮಾನಿಗಳು, ಕುಟುಂಬಸ್ಥರು ಹಾರೈಸಿದ್ದಾರೆ. ಬ್ಯಾಂಕ್ ಜನಾರ್ಧನ್ ತರ್ಲೆ ನನ್ ಮಗ , , ಗಣೇಶ ಸುಬ್ರಹ್ಮಣ್ಯ, ಗೌರವ , ರಂಗ ಎಸ್ ಎಸ್ ಎಲ್ ಸಿ , ಬಂಡಾ ಅಲ್ಲ ಬಹದ್ದೂರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

