HomeEntertainment68 ನೇ ವಸಂತಕ್ಕೆ ಕಾಲಿಟ್ಟ ಹಾಸ್ಯ ನಟ ಬ್ರಹ್ಮಾನಂದಂ

68 ನೇ ವಸಂತಕ್ಕೆ ಕಾಲಿಟ್ಟ ಹಾಸ್ಯ ನಟ ಬ್ರಹ್ಮಾನಂದಂ

ದಕ್ಷಿಣ ಭಾರತದ ಜನಪ್ರಿಯ ಹಾಸ್ಯ ನಟ ಬ್ರಹ್ಮಾನಂದಂ ಇಂದು 68ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1986 ರಲ್ಲಿ ತೆರೆಕಂಡ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಚಾಂತಬ್ಬಾಯ್’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಸುಮಾರು ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಇವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. 2004ರಲ್ಲಿ ತೆರೆಕಂಡ ನ್ಯೂ ಚಿತ್ರದ ಮೂಲಕ ತಮಿಳು ಚಿತ್ರರಂಗ ಪ್ರವೇಶಿಸಿದರು.

ಟಾಲಿವುಡ್ ಚಿತ್ರರಂಗದಲ್ಲಿ ಹೆಚ್ಚಾಗಿ ನಟಿಸಿರುವ ಬ್ರಹ್ಮಾನಂದಂ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ನಿನ್ನಿಂದಲೇ’ ಸಿನಿಮಾದಲ್ಲಿ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದರು. ಬ್ರಹ್ಮಾನಂದಂ ಹಾಸ್ಯ ನಟ ಮಾತ್ರವಲ್ಲದೆ ಗಾಯಕರಾಗಿಯೂ ಮಿಂಚಿದ್ದಾರೆ. ಬ್ರಹ್ಮಾನಂದಂ ಇತ್ತೀಚಿಗೆ ಮಹೇಶ್ ಬಾಬು ಅಭಿನಯದ ‘ಗುಂಟೂರು ಕಾರಂ’ ನಲ್ಲಿ ಅಭಿನಯಿಸಿದ್ದು, ಈ ಸಿನಿಮಾ ಈಗಾಗಲೇ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular