ನವದೆಹಲಿ: ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 51.50 ರೂ.ಗಳಷ್ಟು ಅಗ್ಗವಾಗಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದ್ದು, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 51.50 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.
ಇದು ಸೆಪ್ಟೆಂಬರ್ 1ರ ಇಂದಿನಿಂದಲೇ ಜಾರಿಗೆ ಬರುತ್ತದೆ. ದೆಹಲಿಯಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಸೆಪ್ಟೆಂಬರ್ 1 ರಿಂದ 1580 ರೂ.ಗಳಾಗಿರುತ್ತದೆ. 14.2 ಕೆಜಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ.
ಏಪ್ರಿಲ್ 1 ರಂದು, ಹೊಸ ಹಣಕಾಸು ವರ್ಷದಲ್ಲಿ ಜನರಿಗೆ ಪರಿಹಾರವಾಗಿ, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದ್ದವು. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 1 ಸೋಮವಾರದಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್(ಎಲ್‌ಪಿಜಿ) ಸಿಲಿಂಡರ್‌ಗಳ ದರವನ್ನು 51.50 ರೂ.ಗಳಷ್ಟು ಕಡಿಮೆ ಮಾಡಿವೆ. 14.2 ಕೆಜಿ ಗೃಹಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ, ಸೆಪ್ಟೆಂಬರ್ 1 ರಿಂದ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1580 ರೂ.ಗಳಾಗಿರುತ್ತದೆ.
Commercial LPG prices slashed by Rs 51.50 from Sept 1; no change in domestic cylinder rates
— ANI Digital (@ani_digital) August 31, 2025
Read @ANI Story | https://t.co/XT3Vj4CN7m#CommercialLPG #LPG #prices #domesticcylinder pic.twitter.com/dNPS6qNKFH