BREAKING NEWS: ಗ್ಯಾಸ್ ಸಿಲಿಂಡರ್ ದರ 171 ರೂ. ಇಳಿಕೆ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿತ

ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 171.50 ರೂ. ಕಡಿತಗೊಳಿಸಲಾಗಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1856.50 ರೂ. ಆಗಲಿದೆ. ಆದರೆ, ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಕೋಲ್ಕತ್ತಾದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಹಿಂದಿನ 2132 ರೂ.ನಿಂದ 1960.50 ರೂ. ಆಗಲಿದೆ. ಮುಂಬೈನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಹಿಂದಿನ 1980 ರೂ.ನಿಂದ 1808 ರೂ. ಆಗಲಿದೆ.

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 171.50 ರೂ. ಕಡಿತಗೊಳಿಸಿವೆ. ದೇಶೀಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

https://twitter.com/ani_digital/status/1652861880942182403

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read