ಇಂದಿರಾ ಕ್ಯಾಂಟೀನ್ ಗೂ ಕಮಿಷನ್ ಕಾಟ, ಕಾಂಗ್ರೆಸ್ ಗೆ ಭರ್ಜರಿ ಫುಲ್ ಮೀಲ್ಸ್ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಇಂದಿರಾ ಕ್ಯಾಂಟೀನ್ ಗೂ ಕಮಿಷನ್ ಕಾಟ ಶುರುವಾಗಿದೆ, ಕಡುಭ್ರಷ್ಟ ಕಾಂಗ್ರೆಸ್ ಗೆ ಇಂದಿರಾ ಕ್ಯಾಂಟೀನ್ನಲ್ಲಿ ಭರ್ಜರಿ ಫುಲ್ ಮೀಲ್ಸ್ ! ಸಿಕ್ಕಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ಭ್ರಷ್ಟಾಚಾರ ಮಾಡುವ ಏಕೈಕ ಉದ್ದೇಶಕ್ಕಾಗಿ ಸಿದ್ದರಾಮಯ್ಯ ಅವರು ಆರಂಭಿಸಿದ ಇಂದಿರಾ ಕ್ಯಾಂಟೀನ್ ಅವರ ಪಾಲಿಗೆ ನಿತ್ಯ ಚಿನ್ನದ ಮೊಟ್ಟೆಯಿಡುವ ಕೋಳಿ. ಬಡವರ ಹೆಸರಿನಲ್ಲಿ ಕಾಂಗ್ರೆಸ್ಸಿಗರು ತಮ್ಮ ಜೇಬುಗಳನ್ನು ಶ್ರೀಮಂತಗೊಳಿಸಲು ಇಟ್ಟ ಇಂದಿರಾ ಎಂಬ ಹೆಸರಂತೂ ಈ ಯೋಜನೆಗೆ ಅತಿ ಸೂಕ್ತವಾಗಿ ಹೊಂದುತ್ತದೆ ಎಂಬುದಕ್ಕೆ ನಮ್ಮ ಪ್ರತಿವಾದವಿಲ್ಲ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ಇನ್ನೊಂದು ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದ ಬಿಜೆಪಿ ‘ವಿರೋಧ ಪಕ್ಷದಲ್ಲಿದ್ದಾಗ ಸುಳ್ಳು ಆರೋಪಗಳನ್ನು ಮಾಡಿ ನ್ಯಾಯಾಂಗ ತನಿಖೆ ಆಗಬೇಕೆಂದು ಆಗ್ರಹಿಸುತ್ತಿದ್ದ ಸಿದ್ದರಾಮಯ್ಯ ಅವರು ಇಂದು ನ್ಯಾಯಾಂಗ ತನಿಖೆಗೆ ಕೊಡಬೇಕಾದ ಪ್ರಕರಣಗಳ ಪಟ್ಟಿ: ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ವಿರುದ್ಧ ನ್ಯಾಯಾಂಗ ತನಿಖೆ ಆಗಬೇಕು..! ಶ್ಯಾಡೋ ಸಿಎಂ ವರ್ಗಾವಣೆ ದಂಧೆ ವಿರುದ್ಧ ನ್ಯಾಯಾಂಗ ತನಿಖೆ ಆಗಬೇಕು..! ಹಣ ಸಂಗ್ರಹಿಸಿ ಸಿಕ್ಕಿಬಿದ್ದಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ಆಗಬೇಕು..! ಕಾಸಿಗಾಗಿ ಪೋಸ್ಟಿಂಗ್ ಮಾಡಿರುವ ಕಾಂಗ್ರೆಸ್ ಮೇಲೆ ನ್ಯಾಯಾಂಗ ತನಿಖೆ ಆಗಬೇಕು..! ಚುನಾವಣೆ ವೇಳೆ ಕುಕ್ಕರ್, ಇಸ್ತ್ರಿ ಪಟ್ಟಿಗೆ ಹಂಚಿರುವ ಸಿದ್ದರಾಮಯ್ಯ ಅವರ ಮೇಲೆ ನ್ಯಾಯಾಂಗ ತನಿಖೆ ಆಗಬೇಕು..! ಸಿದ್ದರಾಮಯ್ಯ ಅವರು ಶುದ್ಧ ಹಸ್ತರು, ಸಾಚಾಗಳು ಎಂದು ಸಾಬೀತುಪಡಿಸಲೇ ಬೇಕಾದ ಸಮಯ ಬಂದಿದೆ. ಕೈಯಲ್ಲಿ ಅಧಿಕಾರವಿದೆ ನ್ಯಾಯಾಂಗ ತನಿಖೆ ಕೊಟ್ಟು ನಾವು ಮಜವಾದಿಯಲ್ಲ ಸಮಾಜವಾದಿ ಎಂದಾದರೂ ತೋರಿಸಿ..!’ ಎಂದು ಬಿಜೆಪಿ ಕಿಡಿಕಾರಿದೆ.

https://twitter.com/BJP4Karnataka/status/1714848210135691392

https://twitter.com/BJP4Karnataka/status/1714863622697181478

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read