HomeLatest NewsBIG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿ ಸಮೀಕ್ಷೆ ಅವಧಿ...

BIG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಿಸಿ ಆದೇಶ

ಬೆಂಗಳೂರು : ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಏನಿದೆ ಆದೇಶದಲ್ಲಿ

ಸರ್ಕಾರದ ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಬಗ್ಗೆ ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.
ದಿನಾಂಕ: 27-03-2025 ರಂದು ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ದಿನಾಂಕ: 05-05-2025 ರಿಂದ ಕರ್ನಾಟಕ ಸರ್ಕಾರದ ವತಿಯಿಂದ ಮನೆ ಮನೆ ಸಮೀಕ್ಷೆ ನಡೆಸುತ್ತಿದ್ದು ಪ್ರಸ್ತುತ ಪ್ರಗತಿಯಲ್ಲಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾನ್ಯ ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಅವಧಿಯನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ.

1) ಮನೆ-ಮನೆ ಭೇಟಿ ನೀಡಿ ಸಮೀಕ್ಷೆ- ದಿನಾಂಕ: 25-05-2025 ರವರೆಗೆ ವಿಸ್ತರಿಸಲಾಗಿದೆ.
2) ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) 3 ದಿನಗಳ ಕಾಲ ದಿನಾಂಕ:26-05-2025 ರಿಂದ 28-05-2025 ರವರೆಗೆ ಮರು ನಿಗದಿಪಡಿಸಲಾಗಿದೆ.
3) ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ದಿನಾಂಕ:19-5-2025 ರಿಂದ 28-5-2025 ರವರೆಗೆ ನಿಗದಿಪಡಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular